ಸೋಮವಾರಪೇಟೆ, ಸೆ. 2: ಶತಮಾನಗಳ ಹಿಂದೆ ಏಳುಸಾವಿರ ಸೀಮೆಯೆಂದು ಕರೆಯಲ್ಪಡುತ್ತಿದ್ದ ಪ್ರದೇಶದಲ್ಲಿ ಒಮ್ಮಿಂದೊಮ್ಮೆಲೆ ಭೀಕರ ಬರಗಾಲ ಬಂದು ಊರಿನಲ್ಲಿದ್ದ ಬೃಹತ್ ಕೆರೆಯಲ್ಲೂ ಹನಿ ನೀರು ಸಿಗದಾದಾಗ, ಸಾಕ್ಷಾತ್ ಜಲದೇವತೆ ಯಾಗಿ ಬೃಹತ್ ಕೆರೆಗೆ ಹಾರವಾದ ದೈವಿಕ ಇತಿಹಾಸ ಹೊಂದಿರುವ ತಾಲೂಕಿನ ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನ ಕೆರೆಗೆ ಗೌರಿ ಹಬ್ಬದ ದಿನವಾದ ತಾ. 4ರಂದು ಬಾಗಿನ ಅರ್ಪಣೆ ನೆರವೇರಲಿದ್ದು, ಗ್ರಾಮದ ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ಸಮಿತಿ ಸಕಲ ಸಿದ್ದತೆಯಲ್ಲಿ ತೊಡಗಿದೆ.