ಸೋಮವಾರಪೇಟೆ, ಡಿ. 28: ಇಲ್ಲಿಗೆ ಸಮೀಪದ ಐಗೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಶಾಲೆಯ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಕ್ಕಳಿಗೆ ಸೈಕಲ್ ವಿತರಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಪೂರ್ಣಿಮ ಗೋಪಾಲ್, ತಾ.ಪಂ. ಸದಸ್ಯೆ ಸಬಿತಾ ಚನ್ನಕೇಶವ, ಶಾಲೆಯ ಶಿಕ್ಷಕರುಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.