ಕೂಡಿಗೆ, ಸೆ. 28: ಕೂಡಿಗೆಯ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ಕಂದಾಯ ತಿದ್ದುಪಡಿ ಅದಾಲತ್ ಕಾರ್ಯಕ್ರಮ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು.

ತಾಲೂಕು ತಹಶೀಲ್ದಾರ್ ಕೃಷ್ಣ ಅವರ ಸಮ್ಮುಖದಲ್ಲಿ ಆರ್‍ಟಿಸಿಯಲ್ಲಿರುವ ನ್ಯೂನತೆಗಳ ಬಗ್ಗೆ ಹೋಬಳಿ ವ್ಯಾಪ್ತಿಯ ಕಂದಾಯ ಪರಿವೀಕ್ಷಕರು ಮತ್ತು ಗ್ರಾಮ ಲೆಕ್ಕಿಗರ ಸಮ್ಮುಖದಲ್ಲಿ ತಿದ್ದುಪಡಿ ಮಾಡಲಾಯಿತು.

ಅದಾಲತ್‍ನಲ್ಲಿ ಹಾಜರಿದ್ದ ನೂರಾರು ರೈತರು ತಮ್ಮ ಜಮೀನಿನ ವಿವರ ಹಾಗೂ ನ್ಯೂನತೆಗಳ ಬಗ್ಗೆ ಚರ್ಚಿಸಿ ಪರಿಹಾರವನ್ನು ಕಂಡುಕೊಂಡರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ, ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್ ಕುಮಾರ್, ಕಂದಾಯ ಪರಿವೀಕ್ಷಕ ನಂದಕುಮಾರ್, ಗ್ರಾಮ ಲೆಕ್ಕಿಗ ಪ್ರಸಾದ್ ಸೇರಿದಂತೆ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.