ಮಡಿಕೇರಿ, ನ.11: ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಸಮುದಾಯದ ಮುಖಂಡರ ಸಲಹೆ ಹಾಗೂ ಸಹಕಾರದೊಂದಿಗೆ ತಾ. 17ರಂದು ಜಿಲ್ಲಾಡಳಿತದ ವತಿಯಿಂದ ಕನಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಇಲಾಖೆ ಅಧಿಕಾರಿಗಳು ಹಾಗೂ ಸಮುದಾಯದ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕನಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಮಹಾನ್ ದಾರ್ಶನಿಕರು ಹಾಗೂ ಕೀರ್ತನಾಕಾರರಾದ ಕನಕದಾಸ ಅವರ ಜನ್ಮ ಜಯಂತಿ ಆಚರಣೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸುವಂತಾಗಲು ಎಲ್ಲಾ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು. ಕಳೆದ ಬಾರಿಯಂತೆ ಈ ಬಾರಿಯೂ ಅಚ್ಚುಕಟ್ಟು ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಕನಕ ಜಯಂತಿಯನ್ನು ತಾ. 17 ರಂದು ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಹಬ್ಬವನ್ನಾಗಿ ಆಚರಿಸಬೇಕಿದ್ದು, ಆ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವಂತಾಗಲು ಜನ ಪ್ರತಿನಿಧಿಗಳು, ಸಮದಾಯದ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಆಹ್ವಾನಿಸುವಂತೆ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಕಳೆದ ಬಾರಿಯಂತೆ ಈ ಬಾರಿಯೂ ಕನಕದಾಸ ಜಯಂತಿಯನ್ನು ಅರ್ಥಪೂರ್ಣ ವಾಗಿ ಆಚರಿಸಲು ಇಲಾಖೆ ಅಧಿಕಾರಿಗಳು ಮತ್ತು ಸಮುದಾಯ ಮುಖಂಡರು ಸಹಕರಿಸುವಂತೆ ಮನವಿ ಮಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಳ್ಳಯ್ಯ ಅವರು ಕನಕ ಜಯಂತಿ ಅರ್ಥಪೂರ್ಣ ಆಚರಣೆ ಮಾಡುವ ಬಗ್ಗೆ ಹಲವು ಮಾಹಿತಿ ನೀಡಿ, ನಡೆಸಲಾಗುವದು. ಕೀರ್ತನೆ ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಏರ್ಪಡಿಸಲಾಗುವದು ಎಂದು ತಿಳಿಸಿದರು.
ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಮಹೇಶ್, ಪ್ರಧಾನ ಕಾರ್ಯದರ್ಶಿ ಗಂಗಾಧರ್, ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್, ನಿರ್ದೇಶಕ ನಾಗೇಶ್, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ಮಣಜೂರು ಮಂಜುನಾಥ್ ಇತರರು ಇದ್ದರು.