ವೀರಾಜಪೇಟೆ, ಆ. 15: ಲಿಂಗೈಕ್ಯ ಶ್ರೀಶ್ರೀ ಶಾಂತಮಲ್ಲ ಸ್ವಾಮೀಜಿಯವರ 19ನೇ ಸಂಸ್ಮರಣೆ ದಿನದ ಅಂಗವಾಗಿ ತಾ. 17 ರಂದು ಅರಮೇರಿಯ ಶ್ರೀ ಕಳಂಚೇರಿ ಮಠದ ಆಶ್ರಯದ ಎಸ್.ಎಂ.ಎಸ್. ವಿದ್ಯಾಪೀಠದಲ್ಲಿ ರಕ್ತದಾನ ಶಿಬಿರ ಮತ್ತು ಘನತ್ಯಾಜ್ಯ ನಿರ್ವಹಣೆ ಹೇಗೆ ಎಂಬದರ ಕುರಿತು ಪ್ರದರ್ಶನ ಮತ್ತು ಪ್ರಾತ್ಯಕ್ಷಿಕತೆ ಏರ್ಪಡಿಸಲಾಗಿದೆ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಯವರು ತಿಳಿಸಿದ್ದಾರೆ.

ಈ ಪ್ರಯುಕ್ತ ರಕ್ತದಾನದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಶ್ರೀ ಮಠದ ಇಂದಿನ ಹಲವು ಏಳಿಗೆಗಳಿಗೆ ಪ್ರಮುಖ ಕಾರಣಕರ್ತರಾಗಿದ್ದ ಲಿಂಗೈಕ್ಯ ಶ್ರೀಶ್ರೀ ಶಾಂತಮಲ್ಲ ಸ್ವಾಮೀಜಿಯವರು ಸಮಾಜದ ಬಗ್ಗೆ ದೀರ್ಘದೃಷ್ಟಿಯ ಯೋಜನೆಗಳನ್ನು ಇಟ್ಟುಕೊಂಡಿದ್ದರು. ಸ್ವಾಮೀಜಿ ಯವರ ಕನಸುಗಳನ್ನು ನನಸು ಮಾಡುವ ಹಲವು ಕಾರ್ಯಕ್ರಮ ಗಳನ್ನು ಕಳೆದ 18 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದೇವೆ.

ತಾ. 17 ರಂದು ಬೆಳಿಗ್ಗೆ 10.30 ಗಂಟೆಗೆ ಎಸ್.ಎಂ.ಎಸ್. ವಿದ್ಯಾಪೀಠ ಸಭಾಂಗಣದಲ್ಲಿ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಶ್ರೀ ಬೋಧಸ್ವರೂಪಾನಂದ ಮಹಾರಾಜ್ ಅವರು ಕಾರ್ಯಕ್ರಮ ಗಳನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯತ್ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ, ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಡಿ.ಬಿ. ಧರ್ಮಪ್ಪ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಉಪಾಧ್ಯಕ್ಷ ಎಸ್.ಎಸ್. ಸುರೇಶ್ ಹಾಗೂ ಕದನೂರು ಗ್ರಾಮ ಪಂಚಾಯಿತಿ ಸದಸ್ಯೆ ಕೆ.ಎಸ್. ದೇವಕಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.