ಕುಶಾಲನಗರ, ಡಿ 20: ಜನವರಿಯಲ್ಲಿ ಕುಶಾಲನಗರದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಹಿನ್ನೆಲೆಯಲ್ಲಿ ಪರಿಷತ್ ಪದಾಧಿಕಾರಿಗಳು ಮತ್ತು ಪ್ರಮುಖರು ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.ಎರಡು ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಯಾವದೇ ವಿಘ್ನವಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಇದೇ ಸಂದರ್ಭ ಪರಿಷತ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕುಶಾಲನಗರ ಹೋಬಳಿ ಅಧ್ಯಕ್ಷ ಎಂ.ಡಿ.ರಂಗಸ್ವಾಮಿ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಪರಿಷತ್ ಪ್ರಮುಖರಾದ ಫಿಲಿಪ್ವಾಸ್, ಹಂಡ್ರಂಗಿ ನಾಗರಾಜ್, ನಂಜುಂಡಸ್ವಾಮಿ, ಅಶ್ವಥ್, ಕುಮಾರ್, ಉಪಸಮಿತಿಗಳ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್, ಆರ್.ಕೆ. ನಾಗೇಂದ್ರಬಾಬು ಮತ್ತಿತರರು ಇದ್ದರು.