ಮಡಿಕೇರಿ, ಆ. 5: ಪ್ರಧಾನಿ ನರೇಂದ್ರ ಮೋದಿ ಅವರ ನೆÉೀತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಕಾಂಗ್ರೆಸ್ ಪಕ್ಷದ ಶವಯಾತ್ರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಮನುಮುತ್ತಪ್ಪ ಟೀಕಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಹೀಗಿದ್ದೂ ಕಾಂಗ್ರೆಸ್ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದರೆ ಬಿಜೆಪಿ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ದುರಾಡಳಿತವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಇಳಿದಿದೆ.