ಮಡಿಕೇರಿ, ಆ. 5: ಕಾಡಾನೆ ಹಾವಳಿಯಿಂದಾಗಿ ಜನಸಾಮಾನ್ಯರಿಗೆ ತೀರಾ ತೊಂದರೆಯಾಗುತ್ತಿದ್ದು, ಪ್ರಾಣಹಾನಿ, ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟಾಗುತ್ತಿದೆ. ಈ ಕಾಡಾನೆಗಳನ್ನು ಜಿಲ್ಲೆಯಿಂದ ಸ್ಥಳಾಂತರಿಸುವಂತೆ ಆಗ್ರಹಿಸಿ, ಜನಪರ ಹೋರಾಟ ಸಮಿತಿ ವತಿಯಿಂದ ಅರಣ್ಯ ಭವನದೆದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ. ಸಮಿತಿ ಸಂಚಾಲಕ ಬಲ್ಲಾರಂಡ ಮಣಿ ಉತ್ತಪ್ಪ ನೇತೃತ್ವದಲ್ಲಿ ಹೆಚ್.ಎಸ್. ತಿಮ್ಮಪ್ಪಯ್ಯ, ಮೂಜಿಬೈಲು ನಾಣಯ್ಯ, ಕಂಠಿ ಕಾರ್ಯಪ್ಪ ಇನ್ನಿತರರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.