ಸಿದ್ದಾಪುರ, ಜೂ. 18: ಸಮೀಪದ ಪಾಲಿಬೆಟ್ಟದ ಗ್ರಾಮ ಪಂಚಾಯಿತಿ ಸಮುದಾಯ ಭವನದ ಸಭಾಂಗಣದಲ್ಲಿ ವೀರಾಜಪೇಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮದ ಸಮಾರೋಪ ಸಮಾರಂಭ ಗ್ರಾ.ಪಂ. ಅಧ್ಯಕ್ಷ ಪುಲಿಯಂಡ ಬೋಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಜಯಪ್ರಕಾಶ್ ಶಿಬಿರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ಮನುಷ್ಯನು ಆತನಿಗೆ ಉಪಯೋಗವಾಗುವ ಕಾನೂನುಗಳನ್ನು ತಿಳಿದುಕೊಂಡಲ್ಲಿ ಹಲವು ಸಮಸ್ಯೆಗಳಿಂದ ಮುಕ್ತಿ ಕಾಣಲು ಸಾಧ್ಯ ಎಂದು ಹೇಳಿದರು.
ಈ ಸಂದರ್ಭ ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಎನ್.ಜಿ. ಕಾಮತ್, ಜಿಲ್ಲಾ ಪಂಚಾಯಿತಿ ಸದಸ್ಯ ವಿಜು ಸುಬ್ರಮಣಿ, ತಾಲೂಕು ಪಂಚಾಯಿತಿ ಸದಸ್ಯ ಅಜಿತ್ ಕರುಂಬಯ್ಯ, ವಕೀಲರಾದ ಬಿ.ಯು. ಪ್ರತಿಷ್ಠ, ಬಿ.ಟಿ. ಗೀತಾ, ಬಿ.ಎನ್. ಸತೀಶ್, ಅನುಪಮ ಕಿಶೋರ್, ಕೆ.ವಿ. ಸುನಿಲ್, ಪ್ರಶಾಂತ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ್ಲ ಹಾಗೂ ವಿವಿಧ ಮಹಿಳಾ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.