ನಾಪೆÇೀಕ್ಲು, ಜ. 28: ನಾಪೆÇೀಕ್ಲು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಂಗಳಕ್ಕೆ ನೆಲಹಾಸು ಹಾಗೂ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವಳದ ಬಳಿಯ ಸಮುದಾಯ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಬೆಂಗಳೂರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕದ್ದಣಿಯಂಡ ಹರೀಶ್ ಬೋಪಣ್ಣ ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಶಾಲಾ ಅಂಗಳಕ್ಕೆ ನೆಲಹಾಸು (ಇಂಟರ್ಲಾಕ್) ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಈ ಹಿಂದೆಯೇ ಮನವಿ ಪತ್ರ ಸಲ್ಲಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಯೋಜನೆ ಸಾಂಖ್ಯಿಕ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿರುವ ಎಂ.ಆರ್.ಸೀತಾರಾಂ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ ಪರಿಣಾಮ ಅವರು ಮಲೆನಾಡು ಅಭಿವೃದ್ಧಿ ನಿಗಮದಿಂದ ಶಾಲೆಯ ನೆಲಹಾಸು ನಿರ್ಮಾಣಕ್ಕೆ ರೂ. 8.50 ಲಕ್ಷ ರೂ.ಗಳನ್ನು ಮಂಜೂರು ಮಾಡಿದ್ದಾರೆ. ಹಾಗೆಯೇ ಮಕ್ಕಿ ಶ್ರೀ ಶಾಸ್ತಾವು ದೇವಳದ ಬಳಿ ಸಮುದಾಯ ಭವನ ನಿರ್ಮಿಸಲು ರೂ. 16 ಲಕ್ಷ ಮಂಜೂರು ಮಾಡಲಾಗಿದ್ದು, ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.
ಈ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿದ್ದಾಟಂಡ ಎಸ್.ತಮ್ಮಯ್ಯ, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ನಾಪೆÇೀಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಾಳೆಯಡ ಸಾಬಾ ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ, ಮಾಚೇಟಿರ ಕುಸು ಕುಶಾಲಪ್ಪ, ಬಾಚಮಂಡ ಲವ ಚಿಣ್ಣಪ್ಪ, ಬೊಳ್ಳಂಡ ಸರಿ, ನಾಯಕಂಡ ಕುಂಞಣ್ಣ, ಕೊಂಡಿರ ನಾಣಯ್ಯ, ಚೋಕಿರ ಪ್ರಭು, ರೋಶನ್, ಕುಟ್ಟಂಜೆಟ್ಟಿರ ಶ್ಯಾಮ್ ಬೋಪಣ್ಣ, ಕೊಂಡಿರ ರಾಜಪ್ಪ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎ.ವಿಶ್ವವಾಥ್, ಉಪಪ್ರಾಂಶುಪಾಲೆ ಪಿ.ಕೆ. ನಳಿನಿ, ಮತ್ತಿತರರು ಇದ್ದರು.