ಸೋಮವಾರಪೇಟೆ,ಜ.18: ಮಡಿಕೇರಿ ವಿಧಾನ ಸಭಾ ಕ್ಷೇತ್ರದ 4 ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರದಿಂದ ರೂ. 3.12 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರು ವದಾಗಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಕಾಲೇಜುಗಳ ದುಸ್ಥಿತಿ ಬಗ್ಗೆ ತಾವು ಪದವಿ ಪೂರ್ವ ಶಿಕ್ಷಣ ಇಲಾಖೆಯ ಗಮನ ಸೆಳೆದ ಹಿನ್ನೆಲೆ ಇದೀಗ ಇಲಾಖೆ ವತಿಯಿಂದ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 78 ಲಕ್ಷ, ಶಿರಂಗಾಲ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ ಹಾಗೂ ನೆಲ್ಲಿಹುದಿಕೇರಿ ಸರ್ಕಾರಿ ಕಾಲೇಜುಗಳಿಗೆ ತಲಾ 78 ಲಕ್ಷದಂತೆ ಒಟ್ಟು 3.12ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದ್ದು, ಕಾಲೇಜಿನ ಕಟ್ಟಡ ದುರಸ್ತಿ, ಶೌಚಾಲಯ, ಲ್ಯಾಬೋರೇಟರಿ ಕಾಮಗಾರಿಗಳಿಗೆ ಅನುದಾನ ಬಳಕೆ ಮಾಡಲಾಗುವದು ಎಂದು ರಂಜನ್ ತಿಳಿಸಿದ್ದಾರೆ.