ಕುಶಾಲನಗರ, ಅ. 18: ಕಾವೇರಿ ನದಿ ಸ್ವಚ್ಛತಾ ಆಂದೋಲನ ಆಶ್ರಯದಲ್ಲಿ ಕುಶಾಲನಗರದ ದೇವಾಲಯಗಳಿಗೆ ಹಾಗೂ ಸಾರ್ವಜನಿಕರಿಗೆ ಪವಿತ್ರ ಕಾವೇರಿ ತೀರ್ಥ ವಿತರಣೆ ನಡೆಯಿತು.

ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ತಟದಲ್ಲಿ ಅರ್ಚಕ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ತೀರ್ಥ ಪೂಜೆ ನಡೆದು ನಂತರ ಸಾರ್ವಜನಿಕರಿಗೆ ವಿತರಿಸಲಾಯಿತು. ಕುಶಲ ಅರ್ಚಕರ ಸಂಘದ ಅಧ್ಯಕ್ಷ ಪರಮೇಶ್ವರ ಭಟ್ ಅವರು ಹಿರಿಯ ನಾಗರಿಕರು ಹಾಗೂ ಶ್ರೀ ಗಣಪತಿ ದೇವಾಲಯ ಸಮಿತಿಯ ಅಧ್ಯಕ್ಷ ವಿ.ಎನ್. ವಸಂತಕುಮಾರ್ ಅವರಿಗೆ ತೀರ್ಥ ವಿತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಅಯ್ಯಪ್ಪಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಕೆ.ಆರ್. ಶಿವಾನಂದನ್, ಸ್ವಚ್ಛತಾ ಆಂದೋಲನ ಸಮಿತಿಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್, ಪ್ರಮುಖರಾದ ಡಿ.ಆರ್. ಸೋಮಶೇಖರ್, ಸುಬ್ಬಯ್ಯ, ಶಿವಶಂಕರ್, ಕೆ.ಜಿ. ಮನು, ನಿಡ್ಯಮಲೆ ದಿನೇಶ್, ಅಣ್ಣಯ್ಯ, ವೈಶಾಖ್, ವಿನೋದ್, ಲತೀಶ್, ಕೃಷ್ಣ ಮತ್ತಿತರರಿದ್ದರು.