ಶ್ರೀಮಂಗಲ, ಜ. 19: ದಕ್ಷಿಣ ಕೊಡಗಿನ ಕೆ. ಬಾಡಗ ಗ್ರಾ.ಪಂ. ವ್ಯಾಪ್ತಿಯ ಅಲಂದೂರು ಪೈಸಾರಿ ರಸ್ತೆಗೆ ರೂ. 30 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಿಸಿದ ಕಾಂಕ್ರೀಟ್ ರಸ್ತೆಯನ್ನು ಕೆ. ಬಾಡಗ ಗ್ರಾ.ಪಂ. ಅಧ್ಯಕ್ಷೆ ಉಷಾ ಉದ್ಘಾಟಿಸಿದರು.

ಗಿರಿಜನ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ಮಾಡಲಾಗಿದ್ದು, ಈ ಸಂದರ್ಭ ಜಿ.ಪಂ. ಸದಸ್ಯರುಗಳಾದ ಬಾನಂಡ ಪ್ರಥ್ಯು, ಮುಕ್ಕಾಟಿರ ಶಿವು ಮಾದಪ್ಪ, ತಾ.ಪಂ. ಸದಸ್ಯ ಪೊಯಿಲೇಂಗಡ ಪಲ್ವೀನ್ ಪೂಣಚ್ಚ, ಕೆ. ಬಾಡಗ ಗ್ರಾ.ಪಂ. ಉಪಾಧ್ಯಕ್ಷ ಚೆಪ್ಪುಡಿರ ಡಿ. ಬೋಪಣ್ಣ, ನಾಲ್ಕೇರಿ ಗ್ರಾ.ಪಂ. ಅಧ್ಯಕ್ಷ ಅಲ್ಲುಮಾಡ ಮುತ್ತಪ್ಪ, ಕುಟ್ಟ ಗ್ರಾ.ಪಂ. ಅದ್ಯಕ್ಷೆ ಲೀಲಾ ಪ್ರಭು, ಉಪಾಧ್ಯಕ್ಷ ಹೊಟ್ಟೇಂಗಡ ಪ್ರಕಾಶ್ ಉತ್ತಪ್ಪ, ನಾಲ್ಕೇರಿ ವಲಯ ಕಾಂಗ್ರೇಸ್ ಅಧ್ಯಕ್ಷ ಮಾಚಿಮಾಡ ಮನು, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹೆಚ್.ವೈ. ರಾಮಕೃಷ್ಣ ಹಾಗೂ ಗ್ರಾ.ಪಂ. ಸದಸ್ಯರು ಭಾಗವಹಿಸಿದ್ದರು.