ಸೋಮವಾರಪೇಟೆ, ಸೆ. 22: ಇಲ್ಲಿನ ಕೊಡವ ಸಮಾಜದ ಕೈಲ್ ಮುಹೂರ್ತ ಸಂತೋಷ ಕೂಟ ತಾ. 25 ರಂದು ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.45ಕ್ಕೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಇದೇ ಸಂದರ್ಭ ಜನಾಂಗ ಬಾಂಧವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ತಿಳಿಸಿದ್ದಾರೆ.