ಸೋಮವಾರಪೇಟೆ,ನ.30: ಕಾವೇರಿ ನದಿ ಸ್ವಚ್ಛತೆಯ ಕುರಿತು ಜನಜಾಗೃತಿ, ಸ್ವಚ್ಛತಾ ಆಂದೋಲನ ಮಾಡುವದಕ್ಕೂ ಮೊದಲು ಕಾವೇರಿ ನದಿ ಮೂಲವನ್ನು ರಕ್ಷಿಸುವ ಪ್ರಯತ್ನ ಆಗಬೇಕಾಗಿದೆ ಎಂದು ಮಲೆನಾಡು ಜನಪರ ಹೋರಾಟ ಸಮಿತಿಯ ಪ್ರಮುಖರಾದ ಕಿಶೋರ್ ಅಭಿಪ್ರಾಯಿಸಿದರು.
ತಾಲೂಕಿನ ಗಡಿಭಾಗ ಹೊಸೂರಿನಲ್ಲಿ ನಡೆದ ಕೌಟೆಕಾಯಿ ಜಾತ್ರಾ ಮಹೋತ್ಸವ, ಸಮೂಹ ನೃತ್ಯ ಕಾರ್ಯಕ್ರಮ ಮತ್ತು ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮತ್ತೋರ್ವ ಅತಿಥಿ, ರಾಜ್ಯ ಐಎನ್ಟಿಯುಸಿ ಉಪಾಧ್ಯಕ್ಷ ನಾಪಂಡ ಮುತ್ತಪ್ಪ
ಈಶ್ವರೀಯ ವಿಶ್ವವಿದ್ಯಾಲಯದ ಸಹೋದರಿ ದಾಕ್ಷಾಯಿಣಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಉಜ್ಮಾ ರಿಜ್ವ, ಸಕಲೇಶಪುರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತ ಪ್ರಸನ್ನ, ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜರೀನಾ ಮಂಜುನಾಥ್, ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಕಾವೇರಿ ಸೇನೆ ಸಂಚಾಲಕ ಹೊಸಬೀಡು ಶಶಿ, ಹೊಸೂರು ಜೇಸಿ ಸಂಸ್ಥೆ ಸ್ಥಾಪಕ ಅಧ್ಯಕ್ಷ ಹೆಚ್.ಕೆ. ರಮೇಶ್, ಉಪಸ್ಥಿತರಿದ್ದರು. ಶಾಲಾ ಮಕ್ಕಳಿಂದ ಸಮೂಹ ನೃತ್ಯ ಕಾರ್ಯಕ್ರಮ ನಡೆಯಿತು.