ಮಡಿಕೇರಿ, ನ. 3: ಜಾತ್ಯತೀತ ಶಕ್ತಿಗಳು ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ನಡೆಸಬೇಕೆಂದು ಕರೆ ನೀಡಿರುವ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಎ.ಕೆ.ಸುಬ್ಬಯ್ಯ ಜನ ಜಾಗೃತಿಗಾಗಿ ನ.8 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳÀಲ್ಲಿ ಜಾತ್ಯತೀತ ಸಂಘಟನೆಗಳ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆಯೆಂದು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿಜಿಯನ್ನು ಹತ್ಯೆ ಮಾಡಿದ ಗೋಡ್ಸೆಗೆ ದೇವಾಲಯವನ್ನು ಕಟ್ಟುವ ಸಿದ್ಧಾಂತವನ್ನು ಹೊಂದಿರುವವರು ಮತ್ತು ಡಾ| ಅಂಬೆÉೀಡ್ಕರ್ ಅವರನ್ನು ವಿರೋಧಿಸುವವರು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದರು.ಟಿಪ್ಪು ಸುಲ್ತಾನ್ ಬ್ರಿಟೀಷರ ಪರವಾಗಿದ್ದ ದಂಗೆ ಕೋರರ ವಿರುದ್ಧ ಸಂಘರ್ಷ ನಡೆಸಿದ್ದಾನೆಯೇ ಹೊರತು ಕೊಡವರನ್ನು ಗುರುತಿಸಿ ಯಾವದೇ ಯುದ್ಧ ನಡೆಸಲಿಲ್ಲವೆಂದು ಅಭಿಪ್ರಾಯಪಟ್ಟಿರುವ ಎ.ಕೆ.ಸುಬ್ಬಯ್ಯ, ಶಾಂತಿಯುತ ಮತ್ತು ಸುವ್ಯವಸ್ಥಿತವಾಗಿ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಟಿಪ್ಪು ಜಯಂತಿಯನ್ನು ವಿರೋಧಿಸುವ ಮೂಲಕ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಲಾಗುತ್ತಿದೆ.