ಮಡಿಕೇರಿ, ನ. 12: ಮೈಸೂರಿನ ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯಾಗಿದ್ದ ಮುಸ್ತಫಾ ಹತ್ಯೆಯನ್ನು ಖಂಡಿಸಿ ಮತ್ತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ಈ ಸಂದರ್ಭ ಪಿಎಫ್‍ಐ ಜಿಲ್ಲಾಧ್ಯಕ್ಷ ಅಬೂಬಕರ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ನೂರುದ್ದೀನ್ ಹಾಗೂ ಇನ್ನಿತರರು ಇದ್ದರು.