ಸೋಮವಾರಪೇಟೆ, ಸೆ. 10: ಇಲ್ಲಿನ ನೇಕಾರ ದೇವಾಂಗ ಸಮಾಜದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣಪತಿ ಮೂರ್ತಿಗಳನ್ನು ಆನೆಕೆರೆಯಲ್ಲಿ ವಿಸರ್ಜಿಸಲಾಯಿತು.

ಗಣೇಶೋತ್ಸವ ಪ್ರಯುಕ್ತ ಸಮಾಜ ಬಾಂಧವರಿಗೆ ರಂಗೋಲಿ ಸ್ಪರ್ಧೆ, ಮಕ್ಕಳಿಗೆ ಮ್ಯೂಸಿಕಲ್ ಚೇರ್, ಪುರುಷರಿಗೆ ನಿಧಾನವಾಗಿ ಬೈಕ್ ಚಾಲಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ದೇವಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕೃತ ಮಂಟಪದಲ್ಲಿ ಗೌರಿ-ಗಣಪತಿ ಮೂರ್ತಿಯನ್ನು ಇಟ್ಟು ಮೆರವಣಿಗೆಯ ನಂತರ ವಿಸರ್ಜಿಸಲಾಯಿತು.

ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಪಾಲ್ಗೊಂಡಿದ್ದರು.