ಮಡಿಕೇರಿ, ಸೆ. 1: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಇತ್ತೀಚೆಗೆ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಪರಿಶೀಲಿಸಿ, ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಗ್ರಾಮದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಗಾಳಿಬೀಡು ಗ್ರಾಮ ಪಂಚಾಯಿತಿಗೆ ತೆರಳಿ ಅಲ್ಲಿನ ಸ್ಥಳೀಯರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಅಹವಾಲನ್ನು ಸ್ವೀಕರಿಸಿದರು. ಕಡಮಕಲ್ಲು ರಸ್ತೆ ದುರಸ್ತಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ವಿದ್ಯುತ್ ಸಂಪರ್ಕದ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷÀ ಪುದಿಯತಂಡ ಜೆ. ಸೋಮಯ್ಯ ಮಾತನಾಡಿ, ಕಡಮಕಲ್ಲು ರಸ್ತೆಯನ್ನು ಸರಿಪಡಿಸಿಕೊಡಲು ಮನವಿ ಮಾಡಿದರು. ರಾಜೀವ್ ಗಾಂಧಿ ವಿದ್ಯುಧೀಕರಣ ಯೋಜನೆಯಡಿ ವಿದ್ಯುತ್ ಸಂಪರ್ಕ ಕೆಲವು ಫಲಾನುಭವಿಗಳಿಗೆ ಲಭಿಸಿಲ್ಲ. ಈ ಬಗ್ಗೆ ಕ್ರಮವಹಿಸಲು ಮನವಿ ಮಾಡಿದರು. ವಣಚಲು ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಮಾಡಿದ್ದು, ಮಳೆಗೆ ಚರಂಡಿಯಲ್ಲಿ ಮಣ್ಣು ತುಂಬಿಕೊಂಡಿದ್ದು, ನೀರು ರಸ್ತೆಯಲ್ಲಿ ನಿಂತು ರಸ್ತೆ ಹಾಳಾಗುತ್ತಿರುವದನ್ನು ತಡೆಗಟ್ಟಲು ಮನವಿ ಮಾಡಿದರು. ಅಲ್ಲದೇ ಕಂದಾಯ ಇಲಾಖೆಯಿಂದ 94ಸಿ ನಲ್ಲಿ ಸಿ.ಎನ್.ಡಿ. ಜಾಗವೆಂದು ನಮೂದಿಸಿರುವದರಿಂದ ಸುಮಾರು 200 ಮನೆಗÀಳಿಗೆ ಹಕ್ಕುಪತ್ರ ಹಾಗೂ ಇನ್ನಿತರೆ ಸಮಸ್ಯೆಗಳಾಗುತ್ತಿದೆ. ಅವರುಗಳ ಜಾಗದ ಭೂ ಪರಿವರ್ತನೆಗೆ ಅರಣ್ಯ ಇಲಾಖೆಯಿಂದ ತಡೆ ಓಡ್ಡುತ್ತಿದ್ದಾರೆ. ಜಾಗದ ಭೂ ಪರಿವರ್ತನೆಯಾಗದೇ ನಿರಾಪೇಕ್ಷಣಾ ಪತ್ರ ನೀಡಲು ಸಾಧ್ಯವಾಗುತ್ತಿಲ್ಲ. ಇ-ಸ್ವತ್ತು ತತ್ರಾಂಶ ವಿನಾಯಿತಿಯಿಂದ ಸಮಸ್ಯೆಗಳಾಗುತ್ತಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಕ್ರಮ ಕೈಗೊಳ್ಳಲು ಮನವಿ ಮಾಡಿದರು. ಅಲ್ಲದೇ ಬಿ.ಎಸ್.ಎನ್.ಎಲ್. ದೂರವಾಣಿ ಟವರ್ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ವ್ಯವಹರಿಸಲು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಸಕರಾಗಿ ಆಯ್ಕೆಯಾಗಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸುನಿಲ್ ಸುಬ್ರಮಣಿ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನ ಮಾಡಲಾಯಿತು.

ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಗ್ರಾಮ ಪಂಚಾಯಿತಿಗೆ ವಿಧಾನ ಪರಿಷತ್‍ಗೆ ಆಯ್ಕೆಯಾದ ನಂತರ ಇದೇ ಮೊದಲ ಬಾರಿ ಭೇಟಿ ನೀಡುತ್ತಿದ್ದೇನೆ. ಕಾರ್ಯವ್ಯಾಪ್ತಿಯೊಳಗೆ ಪಂಚಾಯತ್ ರಾಜ್ ವ್ಯವಸ್ಥೆಯಡಿ ವಿಧಾನ ಸಭಾ ಶಾಸಕರೊಂದಿಗೆ ಜೊತೆ ಸೇರಿ ಸಮಸ್ಯೆಗಳನ್ನು ಆಯಾ ಪ್ರಾಧಿಕಾರಗಳ ಮೂಲಕ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಪಡುತ್ತೇನೆಂದು ಭರವಸೆ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುದಿಯತಂಡ ಜೆ. ಸೋಮಯ್ಯ, ಉಪಾಧ್ಯಕ್ಷೆ ಬದಲೇರ ರಾಣಿ ಮುತ್ತಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯೆ ಯಾಲದಾಳು ಪದ್ಮಾವತಿ, ಗ್ರಾ.ಪಂ. ಸದಸ್ಯರು, ಪಿ.ಡಿ.ಓ., ಅರಣ್ಯಾಧಿಕಾರಿಗಳು, ಕಂದಾಯ ಇಲಾಖಾ ಅಧಿಕಾರಿಗಳು ಮತ್ತಿತರರು ಹಾಜರಿದ್ದರು.