*ಗೋಣಿಕೊಪ್ಪಲು, ಅ. 1: ತುಲಾ ಲಘ್ನದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸುವ ಮೂಲಕ ಹತ್ತು ದಿನಗಳ ಕಾಲ ನಡೆಯುವ 38ನೇ ದಸರಾ ಜನೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು.ಬೆಳಿಗ್ಗೆ 8.30ಕ್ಕೆ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಅರ್ಚಕರು ಪೂಜೆ ಸಲ್ಲಿಸುವದರೊಂದಿಗೆ ಹಾಗೂ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದೇವಿ ಆರಾಧನೆಗೆ ನಾಂದಿ ಹಾಡಲಾಯಿತು.
10 ದಿನಗಳ ಕಾಲ ನಡೆಯುವ ಜನೋತ್ಸವಕ್ಕೆ ದಸರಾ ಸಮಿತಿ ಸಕಲ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಸರ್ಕಾರದ 25 ಲಕ್ಷ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.