ವೀರಾಜಪೇಟೆ, ನ. 12: ಮುಂಬರುವ ವಿಧಾನಸಭಾ ಚುನಾವಣೆ ವೇಳೆಗೆ ಜಾತ್ಯತೀತ ಜನತಾದಳ ಬಲಿಷ್ಠವಾಗಿ ಹೊರಹೊಮ್ಮಲಿದ್ದು, ಜಿಲ್ಲೆಯಿಂದ ಪಕ್ಷದ ಅಭ್ಯರ್ಥಿಯನ್ನು ವಿಧಾನಸಭೆಗೆ ಕಳುಹಿಸಿಕೊಡಲಾಗುವದೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ, ಮುಖಂಡರಾದ ಬಸವರಾಜ ಹೊರಟ್ಟಿ, ಜಿ.ಟಿ. ದ್ಯಾವೇಗೌಡ, ಕುಮಾರ್ ಬಂಗಾರಪ್ಪ ಅವರುಗಳ ಸಮ್ಮುಖದಲ್ಲಿ ನಡೆದ ಜೆಡಿಎಸ್ ರಾಜ್ಯ ಮುಖಂಡರ ಸಭೆಯಲ್ಲಿ ಸಂಕೇತ್ ಮಾತನಾಡಿದರು.