ಮಡಿಕೇರಿ, ಸೆ. 7: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ನೇತೃತ್ವದಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ತಾ. 10 ರಂದು ಜಿಲ್ಲಾಮಟ್ಟದ ಕವಿಗೋಷ್ಠಿ ಮತ್ತು ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮ ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಲಿದೆ ಎಂದು ಸಂಪಾಜೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹೆಚ್.ಜಿ. ಕುಮಾರ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ಜರುಗಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಪಾಜೆ ಎಜ್ಯುಕೇಷನ್ ಸೊಸೈಟಿಯ ಅಧ್ಯಕ್ಷ ಎನ್.ಎಸ್. ದೇವಿಪ್ರಸಾದ್ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಪಾಜೆ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರ ಕಳಗಿ, ಚೆಂಬು ಗ್ರಾ.ಪಂ. ಅಧ್ಯಕ್ಷ ಮಾಧವ ಪುಯ್ಯಮಜಲು, ಜಿ.ಪಂ. ಸದಸ್ಯ ಕೆ. ಕುಮಾರ್, ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಡೆಕಲ್ ಸಂತೋಷ್, ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಸಂಸ್ಥೆಯ ಸಂಚಾಲಕ ಕೆ.ಎಸ್. ನಾರಾಯಣ ಭಟ್, ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲೆ ವೈ.ಕೆ. ಮಾಲತಿ, ಮುಖ್ಯ ಶಿಕ್ಷಕ ಎ. ಐತಪ್ಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಭಾ ಕಾರ್ಯಕ್ರಮದ ನಂತರ ಜಿಲ್ಲಾಮಟ್ಟದ ಕವಿಗೋಷ್ಠಿ ನಡೆಯಲಿದೆ. ಇದರ ಅಧ್ಯಕ್ಷತೆಯನ್ನು ಸಂಪಾಜೆ ಹೋಬಳಿ ಕ.ಸಾ.ಪ. ಅಧ್ಯಕ್ಷ ಹೆಚ್.ಜಿ. ಕುಮಾರ್ ವಹಿಸಲಿದ್ದಾರೆ. ಕವಿಗೋಷ್ಠಿಯಲ್ಲಿ ನಾ.ಲ. ವಿಜಯ, ಕಾಂಚನಾ, ಸತೀಶ್ ಚೇರಂಬಾಣೆ, ರಾಣಿ ರವೀಂದ್ರ, ಎನ್.ಬಿ. ಮಾಚಯ್ಯ, ಜಗದೀಶ್ ಜೋಡುಬೀಟಿ, ರಮ್ಯ, ಸ್ಮಿತಾ ಅಮೃತರಾಜ್, ನಿಶ್ಚಿತಾ, ಸಂಗೀತಾ ರವಿರಾಜ್, ಲೀಲಾಕುಮಾರಿ ತೊಡಿಕಾನ, ಸುಕುಮಾರ್, ಕೆ.ಪಿ. ಸುದರ್ಶನ, ಸಹನಾ ಕಾಂತಬೈಲು, ಲೋಕೇಶ್ ಊರುಬೈಲು ಇವರುಗಳು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಜಿ. ಬುದ್ಧನಾಯ್ಕ ಹಾಗೂ ಹಿರಿಯ ಸಾಹಿತಿ ಟಿ.ಕೆ. ಗೋಪಾಲಕೃಷ್ಣ ಭಟ್ ಅವರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ.