ಮಡಿಕೇರಿ, ಅ. 23: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ವಿವಿಧ ಮಹಿಳಾ ಸಂಘ ಸಂಸ್ಥೆಗಳು ಮತ್ತು ಮಹಿಳಾ ಉದ್ಯಮಿಗಳಿಂದ ತಾ. 24 ರಿಂದ 26 ರವರೆಗೆ ಮಾರುಕಟ್ಟೆ ನೆರವು ಯೋಜನೆಯಡಿ ನಡೆಯುವ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭವು ತಾ. 24 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ.
ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿರೋಧ ಪಕ್ಷದ ಮುಖ್ಯ ಸಚೇತಕ ಗಣೇಶ್ ಕಾರ್ಣಿಕ್, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ. ವಿಜು ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಲೀಡ್ ಬ್ಯಾಂಕ್, ಕಾರ್ಪೊರೇಷನ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎ. ದೇವಯ್ಯ, ಮಹಿಳೋದಯ ಮಹಿಳಾ ಒಕ್ಕೂಟದ ಸಂಚಾಲಕರಾದ ಮೋಳಿ ಮತ್ತಿತರರು ಭಾಗವಹಿಸಲಿದ್ದಾರೆ.