ಮೂರ್ನಾಡು, ಅ. 20: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮೂರ್ನಾಡು ವಲಯ ಸಮಿತಿಯ 11ನೇ ವಾರ್ಷಿಕೋತ್ಸವ ತಾ. 23 ರಂದು ನಡೆಯಲಿದೆ.

ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಮಾರಂಭವನ್ನು ಕೆ.ಎಸ್.ಟಿ.ಎ ರಾಜ್ಯ ಸಮಿತಿ ಸಹ ಕಾರ್ಯದರ್ಶಿ ಕೆ.ಹೆಚ್. ಶೇಕ್ ಅಹಮದ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಸ್.ಟಿ.ಎ. ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಕೆ.ಎಸ್. ಮಮತ, ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಉಪಾಧ್ಯಕ್ಷ ಪೆಮ್ಮಂಡ ಪವಿತ್ರ ಕುಂಞಪ್ಪ, ಕೆ.ಎಸ್.ಟಿ.ಎ. ಮಡಿಕೇರಿ ಕ್ಷೇತ್ರ ಸಮಿತಿ ಉಪಾಧ್ಯಕ್ಷ ಬಿ.ಎ. ವಿಠಲ, ಕ್ಷೇತ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಎ.ಪಿ. ತುಳಸಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೆ.ಎಸ್.ಟಿ.ಎ. ವಲಯ ಸಮಿತಿ ಅಧ್ಯಕ್ಷ ಬಿ.ಎನ್. ಜಯರಾಂ ವಹಿಸಲಿದ್ದಾರೆ.