ಮಡಿಕೇರಿ, ನ. 8: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಒಂಬತ್ತನೆ ವಾರ್ಷಿಕ ಸಮ್ಮೇಳನ ಇಪ್ಪತ್ತೊಂದನೇ ಶತಮಾನದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಅವಿಷ್ಕ್ಕಾರಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಕ್ರೈಸ್ಟ್ ವಿಶ್ವವಿದ್ಯಾಲಯದ ಸಹಯೋಗ ದೊಂದಿಗೆ ಡಿಸೆಂಬರ್ 20 ಮತ್ತು 21 ರಂದು ಆಯೋಜಿಸಲಾಗಿದೆ.

ಸಮ್ಮೇಳನದಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರುಗಳು, ವಿಜ್ಞಾನಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಲಿದ್ದಾರೆ, ಹಾಗೂ ಭೌತ ಮತ್ತು ಗಣಿತ ವಿಜ್ಞಾನ ರಸಾಯನ ಮತ್ತು ಜೀವ ವಿಜ್ಞಾನ ಎಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನ ಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಸಹ ಮಂಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ತಜ್ಞ ಸಮಿತಿಯು ಆಯ್ಕೆ ಮಾಡಿದ ಪ್ರತಿ ವಿಷಯದ 2 ಅತ್ಯುತ್ತಮವಾದ ಪ್ರಾತ್ಯಕ್ಷಿಕೆಗಳಿಗೆ ಬಹುಮಾನವನ್ನು ನೀಡಲಾಗುವದು, ಸಂಶೋಧನಾ ಪ್ರಾತ್ಯಕ್ಷಿಕೆಗಳ ಸಾರಾಂಶವನ್ನು ನಿಗದಿತ ನಮೂನೆಯಲ್ಲಿ ಇಮೇಲ್ ಞsಣಚಿಛಿoಟಿಜಿeಡಿeಟಿಛಿe2016@ gmಚಿiಟ.ಛಿom ಮೂಲಕ ತಾ. 22 ರೊಳಗೆ ಸಲ್ಲಿಸ ಬಹುದಾಗಿದೆ ಹೆಚ್ಚಿನ ಮಾಹಿತಿಗೆ hಣಣಠಿ://ತಿತಿತಿ. ಞsಣಚಿಛಿಚಿಜemಥಿ.oಡಿg ಯಲ್ಲಿ ಪಡೆಯಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸದಸ್ಯ ಕಾರ್ಯದರ್ಶಿ ಹೆಚ್. ಹೊನ್ನೆಗೌಡ ತಿಳಿಸಿದ್ದಾರೆ.