ಸೋಮವಾರಪೇಟೆ, ಆ.9 : ಇಲ್ಲಿನ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಅವರ ಪತ್ನಿ ಶಶಿಕಲಾ (53) ಮಂಗಳವಾರ ಸಂಜೆ ಮೃತರಾಗಿದ್ದಾರೆ. ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ತಾ. 10ರಂದು (ಇಂದು) ಅಪರಾಹ್ನ 2 ಗಂಟೆಗೆ ಸೋಮವಾರಪೇಟೆ ಕೊಡವ ಸಮಾಜದ ರುದ್ರ ಭೂಮಿಯಲ್ಲಿ ನಡೆಯಲಿರುವದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಮೃತರು ಪತಿ ಸೇರಿದಂತೆ ಈರ್ವರು ಪುತ್ರರನ್ನು ಅಗಲಿದ್ದಾರೆ.