ಗುಡ್ಡೆಹೊಸೂರು, ಸೆ. 23: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಎಂ. ಎಂ. ರಾಕೇಶ್ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದ ಭಾರದ ಗುಂಡು ಎಸೆತ ಮತ್ತು ಚಕ್ರ ಎಸೆತ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆÉ. ಶಾಲೆಯ ಎಸ್.ಡಿ.ಎಂ.ಸಿ. ಸಭೆಯಲ್ಲಿ ಪ್ರಶÀಸ್ತಿ ಪತ್ರ ಮತ್ತು ಪದಕವನ್ನು ನೀಡಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷ ಬಿ. ಎಸ್. ದಿನೇಶ್ ಮತ್ತು ಸದಸ್ಯರು ಹಾಜರಿದ್ದರು.