ಮಡಿಕೇರಿ, ನ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಮಡಿಕೇರಿ, ತಾಲೂಕು ಯುವ ಒಕ್ಕೂಟ ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ, ನೇತಾಜಿ ಯುವಕ ಹಾಗೂ ಯುವತಿ ಮಂಡಲ ತಾಳತ್ತಮನೆ ಇವರ ಸಂಯುಕ್ತ ಆಶ್ರಯದಲ್ಲಿ ತಾ. 13 ರಂದು ಬೆಳಿಗ್ಗೆ 10 ಗಂಟೆಗೆ ತಾಳತ್ತಮನೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಮೀನುಗಾರಿಕೆ ಸಚಿವ ಪ್ರಮೋದ್ ಮಧ್ವರಾಜ್, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ, ಮದೆ ಗ್ರಾ.ಪಂ. ಅಧ್ಯಕ್ಷ ಎಂ.ಬಿ. ಚಂದ್ರಶೇಖರ್, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಪಿ. ಶಶಿ ಸುಬ್ರಮಣಿ ಪಾಲ್ಗೊಳ್ಳುವರು.
ಸಮಾರೋಪ ಸಮಾರಂಭ
ಅಪರಾಹ್ನ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯೆ ಯಾಲದಾಳು ಪದ್ಮಾವತಿ, ತಾ.ಪಂ. ಸದಸ್ಯೆ ಕೊಡಪಾಲ ಗಣಪತಿ, ಮದೆ ಗ್ರಾ.ಪಂ. ಸದಸ್ಯ ಗಿರೀಶ್ ತಾಳತ್ತಮನೆ ಹಾಗೂ ಮದೆ ಗ್ರಾ.ಪಂ. ಸದಸ್ಯೆ ಪೊನ್ನೇಟಿ ನಿತ್ಯಾ ಕುಮಾರಿ ಪಾಲ್ಗೊಳ್ಳುವರು.