ಗೋಣಿಕೊಪ್ಪಲು, ಡಿ. 16: ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಫ್ಲೋರ್ ಬಾಲ್ ಬಾಲಕ-ಬಾಲಕಿಯರ ಕ್ರೀಡಾಕೂಟ ಗೋಣಿಕೊಪ್ಪ ಕಾವೇರಿ ಕಾಲೇಜು ಚೆಕ್ಕೇರ ಮುತ್ತಣ್ಣ ಒಳಾಂಗಣ ಕ್ರೀಡಾಂಗಣದಲ್ಲಿ ತಾ. 18 ರಂದು ನಡೆಯಲಿದೆ ಎಂದು ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ತಿಳಿಸಿದ್ದಾರೆ.

ಬೆಂಗಳೂರು ಪದವಿಪೂರ್ವ ಶಿಕ್ಷಣ ಇಲಾಖೆ, ಕೊಡಗು ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾವೇರಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ 22 ಜಿಲ್ಲಾ ತಂಡಗಳು ಪಾಲ್ಗೊಳ್ಳಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕ್ರೀಡಾಪಟುಗಳು ಪ್ರಾಂಶುಪಾಲರು ಅಥವಾ ಶಿಕ್ಷಣ ಇಲಾಖೆಯ ದೃಢೀಕರಣ ಅರ್ಹತಾ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ತರಬೇಕಿದೆ. ತಾ. 17 ರಂದು ತಮ್ಮ ಹೆಸರನ್ನು ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ನೋಂದಾಯಿಸಿ ಕೊಳ್ಳುವಂತೆ ತಿಳಿಸಿದರು.

ಕ್ರೀಡಾಕೂಟವನ್ನು ಅಂದು ಬೆಳಿಗ್ಗೆ 10.30 ಕ್ಕೆ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಸಂದರ್ಭ ಕಾವೇರಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಎ.ಸಿ. ಗಣಪತಿ, ಪಿ.ಯು. ಉಪನಿರ್ದೇಶಕ ಟಿ. ಸ್ವಾಮಿ, ಪ್ರಾಂಶುಪಾಲ ಪೂವಣ್ಣ, ಫ್ಲೋರ್ ಬಾಲ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಶುಭಕರ್ ಭುವನೇಶರಾವ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಚೆನ್ನಕೇಶವ ಮೂರ್ತಿ ಪಾಲ್ಗೊಳ್ಳುವರು.

ಸಮಾರೋಪದಲ್ಲಿ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಕಾವೇರಿ ವಿದ್ಯಾಸಂಸ್ಥೆ ನಿರ್ದೇಶಕ ಬೋಪಣ್ಣ, ಉದ್ಯಮಿಗಳಾದ ಕೆ.ಪಿ. ಪೂಣಚ್ಚ, ಪೊನ್ನಿಮಾಡ ಎಸ್. ಪೊನ್ನಣ್ಣ, ದಾನಿ ಉಂಬಾಯಿ, ಫ್ಲೋರ್‍ಬಾಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಮಿನ್ನಂಡ ಜೋಯಪ್ಪ, ಕಾರ್ಯದರ್ಶಿ ಪ್ರಿಜುಜಾನಿ, ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ದೇಚಮ್ಮ ಪಾಲ್ಗೊಳ್ಳುವರು ಎಂದರು.

ಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಸಂತೋಷ್, ಫ್ಲೋರ್‍ಬಾಲ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಮಿನ್ನಂಡ ಜೋಯಪ್ಪ, ಉಪನ್ಯಾಸಕ ಚೇತನ್ ಚಿಣ್ಣಪ್ಪ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗೆ 9482948230 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.