*ಗೋಣಿಕೊಪ್ಪಲು, ಜೂ. 19: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ದಿನೇ ದಿನೇ ಹೆಚ್ಚುತ್ತಿರುವದರಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಪ್ರತಿಭಟನೆ ನಡೆಸಲಾಗುವದು. ಪ್ರತಿಭಟನೆ ನಂತರ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವದು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ, ಆಡಳಿತ ಮಂಡಳಿ, ತೋಟದ ಮಾಲೀಕರು, ಸಾರ್ವಜನಿಕರು, ಹಾಡಿಯ ಜನರು, ಸ್ತ್ರೀ ಶಕ್ರಿ ಸಂಘ, ಸ್ಥಳೀಯ ಎಲ್ಲಾ ಸಂಘ-ಸಂಸ್ಥೆಗಳೊಂದಿಗೆ ಪ್ರತಿಭಟನೆ ನಡೆಸಲಾಗುವದೆಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್ ತಿಳಿಸಿದ್ದಾರೆ.