ಮಡಿಕೆÉೀರಿ ಆ.18 :ವಿವಿಧ ಭೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ತಾ.22 ರಂದು ಮಡಿಕೇರಿಯಲ್ಲಿ ಪಂಜಿನ ಮೆರವಣಿಗೆ ನಡೆಸಲಾಗುವದೆಂದು ದಲಿತ ಸಂಘರ್ಷ ಸಮಿತಿಯ ಭೀಮವಾದ ಘಟಕ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಪಿ. ರಾಜು, ದೇಶದಲ್ಲಿ ಬಿಜೆಪಿ ನೇತೃತ್ವದ ಸರಕಾರ ಬಂದ ನಂತರ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿದೆಯೆಂದು ಆರೋಪಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳೇ ಕಳೆದಿದ್ದರೂ ದೇಶದಲ್ಲಿರುವ ಕೋಮು ವಾದಿಗಳ ಮನೋಸ್ಥಿತಿಯಲ್ಲಿ ಬದಲಾವಣೆಗಳು ಕಾಣುತ್ತಿಲ್ಲ. ಶೋಷಿತ ಸಮುದಾಯ ಗಳ ಮೇಲೆ ಹಲ್ಲೆ, ದಬ್ಬಾಳಿಕೆ, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಿದೆ. ಹೈದರಾಬಾದ್‍ನಲ್ಲಿ ದಲಿತ ಯುವಕ ರೋಹಿತ್ ವೇಮುಲ ಪ್ರಾಣ ಕಳೆದುಕೊಂಡಿದ್ದಾರೆ, ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ ನಾಯಕಿ ಮಾಯಾವತಿ ಅವರನ್ನು ಬಿಜೆಪಿ ಕೀಳಾಗಿ ಕಂಡಿದೆ. ಬಿಹಾರದಲ್ಲಿ ಬೈಕ್ ಕಳ್ಳತನದ ಆರೋಪದಲ್ಲಿ ದಲಿತರನ್ನು ಅಮಾನವೀಯವಾಗಿ ನಡೆಸಿಕೊಳ್ಳ ಲಾಗಿದೆ. ಗುಜರಾತ್‍ನಲ್ಲಿ ಗೋರಕ್ಷಕ ರಿಂದ ದಲಿತ ಯುವಕರ ಮೇಲೆ ಹಲ್ಲೆ ನಡೆದಿದೆ. ಇದೇ ರೀತಿಯ ಅನೇಕ ದೌರ್ಜನ್ಯದ ಘÀಟನೆಗಳು ದೇಶದಾದ್ಯಂತ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಯಾವದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಕಾಂಗ್ರೆಸ್ ಪಕ್ಷ ಕೂಡ ದಲಿತರ ಪರವಾಗಿಲ್ಲವೆಂದು ರಾಜು ಆರೋಪಿಸಿದರು.

ಶೋಷಿತ ಸಮುದಾಯಕ್ಕೆ ಸೂಕ್ತ ರಕ್ಷಣೆ ನೀಡಬೆÉೀಕು ಹಾಗೂ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವದಾಗಿ ಅವರು ಹೇಳಿದರು.

ಅಂಬೇಡ್ಕರ್ ನಿಗಮದಲ್ಲಿ ಅವ್ಯವಹಾರ

ಜಿಲ್ಲೆಯಲ್ಲಿ ಅಂಬೆÉೀಡ್ಕರ್ ನಿಗಮದ ಮೂಲಕ ಅನುಷ್ಠಾನ ಗೊಳ್ಳುತ್ತಿರುವ ಯೋಜನೆಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದೆ ಎಂದು ಆರೋಪಿಸಿ ರುವ ಕೆ.ಪಿ.ರಾಜು, ಉನ್ನತ ಮಟ್ಟದ ತನಿಖೆಯಾಗಬೇಕೆಂದು ಆಗ್ರಹಿಸಿದರು. ಕುಶಾಲನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆಯೆಂದು ಅಸಮಾಧಾನ ವ್ಯಕ್ತಪಡಿಸಿದರು.

ನಂಜರಾಯಪಟ್ಟಣದಲ್ಲಿರುವ ಮದ್ಯದಂಗಡಿಯಿಂದ ಸ್ಥಳೀಯ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಡಚಣೆÉಯಾಗುತ್ತಿದ್ದು, ಇದನ್ನು ತಕ್ಷಣ ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು. ದಲಿತರ ಉದ್ಧಾರಕ್ಕಾಗಿ ಇರುವ ವಿವಿಧ ಇಲಾಖೆಗಳ ಅನುದಾನ ಅರ್ಹ ಫಲಾನುಭವಿಗಳಿಗೆ ಸಿಗದೆ ದುರ್ಬಳಕೆಯಾಗುತ್ತಿರುವ ಶಂಕೆಯಿದ್ದು, ಸಮಗ್ರ ತನಿಖೆ ನಡೆಸಬೇಕೆಂದು ರಾಜು ಆಗ್ರಹಿಸಿದರು.

ಇತ್ತೀಚೆಗೆ ಕುಶಾಲನಗರದಲ್ಲಿ ನಡೆದ ಪಂಜಿನ ಮೆರವಣಿಗೆ ಸಂದರ್ಭ ದಲಿತರು ಹಾಗೂ ಅಲ್ಪಸಂಖ್ಯಾತರನ್ನು ನಿಂದಿಸಿರುವದು ಖಂಡನಾರ್ಹವಾಗಿದ್ದು, ಈ ರೀತಿಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮೂಲಕ ಬಲಿಪಶು ಗಳಾಗಬಾರದೆಂದು ಕರೆ ನೀಡಿದರು.

ಸೋಮವಾರಪೇಟೆ ತಾಲೂಕು ಸಂಚಾಲಕ ಕೆ.ಪಿ. ಶ್ರೀನಿವಾಸ್ ಮಾತನಾಡಿ, ದಲಿತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು. ಗೋಷ್ಠಿಯಲ್ಲಿ ಸಂಘಟನಾ ಸಂಚಾಲಕ ರಾಮ್ ಕುಮಾರ್ ಉಪಸ್ಥಿತರಿದ್ದರು.