ಕುಶಾಲನಗರ, ಅ. 14: ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮೂಲಕ ನದಿ ಸಂರಕ್ಷಣೆಯ ನಿಟ್ಟಿನಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಜಲ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.
ಇತ್ತೀಚೆಗೆ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಕೇಂದ್ರ ಜಲ ಆಯೋಗದ ತಜ್ಞರ ತಂಡದ ಮೂಲಕ ಪ್ರಧಾನ ಮಂತ್ರಿಗಳಿಗೆ ನದಿ ಸಂರಕ್ಷಣೆಯ ಯೋಜನೆ ಕೋರಿ ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಕೇಂದ್ರ ಜಲ ಆಯೋಗದ ಉಪನಿರ್ದೇಶಕ ಅಶೋಕ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಆಯೋಗದ ಅಧ್ಯಕ್ಷರ ಮೂಲಕ ಪ್ರಧಾನಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರವನ್ನು ಅಗತ್ಯ ಕ್ರಮ ಕೈಗೊಳ್ಳುವ ಹಿನ್ನೆಲೆ ಕಾರ್ಯ ಯೋಜನೆ ರೂಪಿಸಲಾಗುವದು ಎಂದು ಅಶೋಕ್ ಕುಮಾರ್ ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಅವರಿಗೆ ಪತ್ರ ಮುಖೇನ ಭರವಸೆ ನೀಡಿದ್ದಾರೆ.