ಮೂರ್ನಾಡು, ಆ. 11: ವಿದ್ಯಾರ್ಥಿ ದಿಸೆಯಲ್ಲಿರುವಾಗಲೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಮದೆನಾಡು ಮದೆಮಹದೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಗುಲಾಬಿ ಜನಾರ್ಧನ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜೀವನದಲ್ಲಿ ಕೇವಲ ಕನಸು ಕಂಡರೆ ಸಾಲದು. ಕನಸು ನನಸಾಗಿಸಲು ತಕ್ಕ ಪರಿಶ್ರಮ ಪಡಬೇಕು. ಸ್ಪಧ್ರ್ಮಾತ್ಮಕ ಯುಗದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಪರಿಶ್ರಮ ಪಟ್ಟರೆ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಗೈಯಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಪ್ರತಿಭಾವಂತರಾಗಿದ್ದು, ಅದನ್ನು ಸದುಪಯೋಗ ಪಡಿಸಿ ಕೊಳ್ಳಬೇಕು ಪ್ರಾಧ್ಯಾಪಕರು ಪೋತ್ಸಾಹ ನೀಡುವದರೊಂದಿಗೆ ಅವರ ಪ್ರತಿಭೆಗಳನ್ನು ಹೊರಹೊಮ್ಮಿಸಲು ಶ್ರಮಿಸಬೇಕು ಎಂದು ತಿಳಿಸಿ ಪದವಿ ಶಿಕ್ಷಣದ ನಂತರ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯುವ ಛಲ ಬೆಳೆಸಿಕೊಳ್ಳಬೇಕು ಎಂದರು. ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟೀರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಖಜಾಂಚಿ ಪುದಿಯೊಕ್ಕಡ ಸಿ. ಸುಬ್ರಮಣಿ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಸಿ.ಜೆ. ಪ್ರಿಯಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ನಾಯಕ ಸಂಕೇತ್, ಉಪಾಧ್ಯಕ್ಷೆ ವಿದ್ಯಾವತಿ, ಕಾರ್ಯದರ್ಶಿ ಅಬ್ದುಲ್ ರೆಹಮಾನ್, ಉಪ ಕಾರ್ಯದರ್ಶಿ ಶೃತಿ, ಸಾಂಸ್ಕøತಿಕ ಕಾರ್ಯದರ್ಶಿ ಮಿಲನ್, ಕೆ.ಟಿ. ಸ್ನೇಹ ಹಾಗೂ ನಿರ್ದೇಶಕರಾಗಿ ಇರ್ಫಾನ್, ಜಿಯಾದ್, ನೌಷಾದ್, ಆಫೀಜ್, ಪ್ರಗೀಶ್ ಪ್ರಮಾಣ ವಚನ ಸ್ವೀಕರಿಸಿದರು. ಕಾಲೇಜಿನ ವಿದ್ಯಾರ್ಥಿ ಮಹಶೂಕ್ ತಂಡ ಪ್ರಾರ್ಥಿಸಿ, ಆರತಿ ಸ್ವಾಗತಿಸಿ, ಅಬ್ದುಲ್ ಬಾಶಿತ್ ಕಾರ್ಯಕ್ರಮ ನಿರೂಪಿಸಿ, ಸ್ನೇಹ ವಂದಿಸಿದರು.