ಮಡಿಕೇರಿ, ಡಿ.30 : ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಜ.1 ರಂದು ಕೊರೆಂಗಾವ್ ವಿಜಯೋತ್ಸವ ಕಾರ್ಯಕ್ರಮ ಕೊಡ್ಲಿಪೇಟೆಯ ಡಾ.ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಶನಿವಾರಸಂತೆ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಹೆಚ್.ಎಂ. ಮರಿಸ್ವಾಮಿ ಉದ್ಘಾಟಿಸ ಲಿದ್ದು, ಕೊಡ್ಲಿಪೇಟೆ ಬಹುಜನ ವಿದ್ಯಾರ್ಥಿ ಸಂಘದ ಸಂಯೋಜಕ ಕೆ.ವಿ.ವಿಜಯ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣಾಕಾರರಾಗಿ ಬೈಲುಕುಪ್ಪೆ ಯ ನಳಂದ ಇಂಟರ್‍ನ್ಯಾಷನಲ್ ಪಿಯು ಕಾಲೇಜಿನ ಉಪನ್ಯಾಸಕ ಬಿ.ಲಕ್ಷ್ಮಣ್ ಪಾಲ್ಗೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶನಿವಾರಸಂತೆ ವಲಯ ಅರಣ್ಯಾಧಿಕಾರಿಗಳಾದ ಗೋವಿಂದರಾಜು, ಕೊಡ್ಲಿಪೇಟೆ ಗ್ರಾ.ಪಂ. ಉಪಾಧ್ಯಕ್ಷ ಡಿ.ಬಿ.ವಿಜಯ್, ದಲಿತ ಸಂಘರ್ಷ ಸಮಿತಿಯ ಪ್ರಮುಖ ಡಿ.ಸಿ. ನಿರ್ವಾಣಪ್ಪ, ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಪ್ರೇಮ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎನ್.ಈ.ಜಯರಾಜ್, ಕೊಡ್ಲಿಪೇಟೆಯ ದಲಿತ ಮುಖಂಡರುಗಳಾದ ಕೆಂಚೇಶ್ವರ, ಡಿ.ಸಿ.ಸೋಮಣ್ಣ, ವೀರಭದ್ರ, ಜಗದೀಶ್, ವೇದಕುಮಾರ್, ದಲಿತ ಸಂಘರ್ಷ ಸಮಿತಿಯ ಯುವ ಒಕ್ಕೂಟದ ಪ್ರಮುಖ ಪ್ರಸನ್ನ, ನಿವೃತ್ತ ಶಿಕ್ಷಕ ಕಾಳಯ್ಯ ಹಾಗೂ ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕÀ ಸಿ.ಜೆ.ಮೋಹನ್ ಮೌರ್ಯ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ಕೊಡ್ಲಿಪೇಟೆಯ ಹ್ಯಾಂಡ್ ಪೋಸ್ಟ್ ಸರ್ಕಲ್‍ನಿಂದ ಡಾ.ಅಂಬೇಡ್ಕರ್ ಸಮುದಾಯ ಭವನದವರೆಗೆ ಬೈಕ್ ರ್ಯಾಲಿ ನಡೆಯಲಿದ್ದು, ದಲಿತ ಸಂಘರ್ಷ ಸಮಿತಿಯ ಪ್ರಮುಖ ಎಂ.ಜಿ. ಶಿವಶಂಕರ್ ರ್ಯಾಲಿಯನ್ನು ಉದ್ಘಾಟಿಸಲಿದ್ದಾರೆ ಎಂದು ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾ ಸಂಯೋಜಕ ಸಿ.ಜೆ. ಮೋಹನ್ ಮೌರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.