ಮಡಿಕೇರಿ, ಸೆ.9 : ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಮೂರು ತಾಲೂಕುಗಳ ನೂತನ ಸಮಿತಿಯ ಪದಾಧಿಕಾರಿಗಳ ಸಭೆ ಮತ್ತು ಪದಗ್ರಹಣ ಸಮಾರಂಭ ಇದೇ ತಾ. 11 ರಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಹೊಟೇಲ್ ಸಮುದ್ರ ಹಾಲ್ನಲ್ಲಿ ನಡೆಯಲಿದೆ ಎಂದು ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ. ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮೂರು ತಾಲೂಕು ಸಮಿತಿ ಮತ್ತು ಜಿಲ್ಲಾ ಸಮಿತಿ ಪದಾಧಿಕಾರಿಗಳು ಸಭೆಗೆ ಹಾಜರಾಗುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ವಿವರಗಳಿಗೆ ಈ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ : 94832 33656