ಕೂಡಿಗೆ, ಜು. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ತಾಲೂಕು ಹೆಬ್ಬಾಲೆ ವಲಯದ ವತಿಯಿಂದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕೂಡುಮಂಗಳೂರು ಗ್ರಾಮ ಪಂಚಾಯ್ತಿ ಸದಸ್ಯೆ ಶೀಲಾ ಅರಸ್ ಉದ್ಘಾಟಿಸಿ, ನಂತರ ಮಾತನಾಡುತ್ತಾ, ಪರಿಸರ ಸಂರಕ್ಷಣೆಯನ್ನು ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳು ರೂಢಿಸಿಕೊಂಡು ಬಂದಲ್ಲಿ ಪರಿಸರವು ಉತ್ತಮವಾಗಿ ಬೆಳವಣಿಗೆಯಾಗಲು ಸಹಕಾರಿಯಾಗುತ್ತದೆ ಎಂದರು.
ಜ್ಞಾನವಿಕಾಸ ಸಮನ್ವಯ ಅಧಿಕಾರಿ ಲತಾ ಪ್ರಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಈರಪ್ಪ ವಹಿಸಿ, ಮಾತನಾಡಿದರು.
ವೇದಿಕೆಯಲ್ಲಿ ಶಾಲಾ ದೈಹಿಕ ಶಿಕ್ಷಕ ಗಣೇಶ್, ರಮೇಶ್, ದಯಾನಂದ ಪ್ರಕಾಶ, ಸಹಶಿಕ್ಷಕಿ ಅನಿತಾ, ಸೇವಾ ಪ್ರತಿನಿಧಿಗಳಾದ ಬಸವರಾಜ್, ನಿರ್ಮಲ ಮತ್ತಿತರರು ಇದ್ದರು.
ಈ ಸಂದರ್ಭ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.