ಮಡಿಕೇರಿ, ಆ. 3: ಪರಿಸರ ಸಂರಕ್ಷಣೆ ಕಡೆ ಹೆಚ್ಚು ಗಮನಹರಿ ಸುವದು ಅತ್ಯಗತ್ಯವಾಗಿದೆ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ್ರ ನ್ಯಾಯಾಧೀಶರಾದ ಪವನೇಶ್. ಡಿ. ಹೇಳಿದ್ದಾರೆ. ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಲಯದಲ್ಲಿ ಇತ್ತೀಚೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿ.ಪಂ., ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಗಿಡ ನೆಡುವ ಕಾರ್ಯಕ್ರಮ ಹಾಗೂ ಕಾನೂನು ಶಿಬಿರಕ್ಕೆ ಒಂದನೇ ಅಪರ ಜಿಲ್ಲಾ ಮತ್ತು ಸತ್ರ್ರ ನ್ಯಾಯಾಧೀಶ ಡಿ. ಪವನೇಶ್ ಚಾಲನೆ ನೀಡಿ ಮಾತನಾಡಿದರು.

ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ವಾಸುದೇವ ಅವರು ಮಾತನಾಡಿ ಆಹಾರ, ನೀರು, ವಸತಿ ಇಲ್ಲದೆ ಬದುಕಲು ಸಾಧ್ಯವಾಗಬಹುದು. ಆದರೆ ಶುದ್ದ ಗಾಳಿ ಇಲ್ಲದೆ ಕ್ಷಣ ಮಾತ್ರ ಬದುಕಲು ಅಸಾಧ್ಯವಾಗಿದೆ, ಶುದ್ದ ಗಾಳಿಯನ್ನು ಪಡೆಯುವಲ್ಲಿ ಪರಿಸರ ಸಂರಕ್ಷಣೆ ಅಗತ್ಯವಾಗಿದೆ ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಮಾತನಾಡಿ, ಮಕ್ಕಳಿಗೆ ಶಾಲಾ ಹಂತದಲ್ಲಿ ಪರಿಸರದ ಮೇಲೆ ಕಾಳಜಿ ಬರುವಂತಹ ಶಿಕ್ಷಣ ಕೊಡಬೇಕು, ಮನೆ, ಶಾಲೆಗಳಲ್ಲಿ ಗಿಡ, ಮರಗಳನ್ನು ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಸಲಹೆ ಮಾಡಿದರು. ಕಾರ್ಯ ಕ್ರಮದಲ್ಲಿ ಜಿಲ್ಲಾ ಆಸ್ಪತ್ರೆಯ ಮಾನಸಿಕ ತಜ್ಞ ಎನ್.ವಿ. ರೂಪೇಶ್ ಗೋಪಾಲ್ ಉಪನ್ಯಾಸ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ಪರಿಸರ ಇಲಾಖೆ ಅಧಿಕಾರಿ ಜಿ.ಆರ್. ಗಣೇಶನ್ ಮತ್ತಿತರರು ಇದ್ದರು.