ಮಡಿಕೇರಿ, ಜ. 29: ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಇಂದು ಶ್ರದ್ಧಾಭಕ್ತಿಯಿಂದ ನೆರವೇರಿತು.
ಈ ಪ್ರಯುಕ್ತ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರ ಪ್ರತಿಷ್ಠೆ, ಆಶ್ಲೇಷ ಬಲಿಪೂಜೆ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗಪೂಜೆ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು.