ಮಡಿಕೇರಿ, ಆ. 8: ಜಿಲ್ಲೆಯಲ್ಲಿ ಪೊಲೀಸ್ ದೂರುಗಳ ಪ್ರಾಧಿಕಾರ ಈಗಾಗಲೇ ರಚನೆಯಾಗಿ, ಪದಾಧಿಕಾರಿಗಳನ್ನು ಹೊಂದಿದೆ. ಅಧ್ಯಕ್ಷರಾಗಿ ಪ್ರಾದೇಶಿಕ ಆಯುಕ್ತರು, ಮೈಸೂರು -0821-2516300 ಮತ್ತು 0821-2414089, ಸದಸ್ಯ ಕಾರ್ಯದರ್ಶಿಯಾಗಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ-08272-2289000, ಸದಸ್ಯರಾಗಿ ಪುಟ್ಟಮಾದಯ್ಯ, ನಿವೃತ್ತ ಕೆ.ಎ.ಎಸ್ ಅಧಿಕಾರಿ(ಸೆಲೆಕ್ಷನ್ ಗ್ರೇಡ್) ಮೈಸೂರು ಜಿಲ್ಲೆ-9481674999 ಹಾಗೂ ಸದಸ್ಯರಾಗಿ ಡಾ. ಪುಷ್ಪಾ ಕುಟ್ಟಣ್ಣ, ನಿವೃತ್ತ ಪ್ರಾಂಶುಪಾಲರು, ಹೊಸಕೇರಿ ಗ್ರಾಮ ಅರೆಕಾಡು ಅಂಚೆ, ಮಡಿಕೇರಿ-08272-230035 ಮತ್ತು 9845504537.

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ ಡಿವೈಎಸ್‍ಪಿ ಮತ್ತು ಕೆಳಗಿನ ಹಂತದ ಪೊಲೀಸ್ ಅಧಿಕಾರಿ/ ಸಿಬ್ಬಂದಿ ಹಂತದಲ್ಲಿ ನಡೆದ ಸಾವು, ತೀವ್ರ ಸ್ವರೂಪದ ಗಾಯ ಅಥವಾ ಅತ್ಯಾಚಾರದ ದೂರಿನ ಬಗ್ಗೆ ವಿಚಾರಣೆ ಮಾಡಬಹುದಾಗಿದೆ.

ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ ಹೊಂದಿರುವ ಅಧಿಕಾರ ಇಂತಿದೆ: ಡಿಎಸ್‍ಪಿ ಮತ್ತು ಕೆಳಗಿನ ಹಂತದ ಪೊಲೀಸ್ ಅಧಿಕಾರಿ-ಸಿಬ್ಬಂದಿ ವರ್ಗದವರ ದುರ್ನಡತೆ ಮತ್ತು ಅಧಿಕಾರ ದುರುಪಯೋಗದ ಬಗ್ಗೆ ವಿಚಾರಣೆ. ಡಿಎಸ್‍ಪಿ ಹುದ್ದೆಯ ಅಧಿಕಾರಿಗಿಂತ ಮೇಲಿನ ದರ್ಜೆಯ ಅಧಿಕಾರಿಯ ವಿರುದ್ಧದ ದೂರನ್ನು ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಕಳುಹಿಸುವದು. ನೇರವಾಗಿ ತೀವ್ರ ದುರ್ನಡತೆಯ ದೂರುಗಳನ್ನು ಸ್ವೀಕರಿಸಿದ್ದಲ್ಲಿ ರಾಜ್ಯ ಪೊಲೀಸ್ ದೂರುಗಳ ಪ್ರಾಧೀಕಾರಕ್ಕೆ ಕಳುಹಿಸುವದು.

ಸಾರ್ವಜನಿಕರು ದೂರು ಸಲ್ಲಿಸಬೇಕಾದ ವಿಳಾಸ: ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಪೊಲೀಸ್ ದೂರುಗಳ ಪ್ರಾಧಿಕಾರ ಮತ್ತು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ-571201. ಅಡಿಷನಲ್ ಡಿಎಸ್‍ಪಿ ಮತ್ತು ಮೇಲಿನ ಹುದ್ದೆಯ ಅಧಿಕಾರಿಗಳ ವಿರುದ್ಧ ಮೇಲೆ ತಿಳಿಸಿದಂತೆ ದೂರು ಸಲ್ಲಿಸುವಂತಿದ್ದಲ್ಲಿ ರಾಜ್ಯ ದೂರುಗಳ ಪ್ರಾಧಿಕಾರಕ್ಕೆ ದೂರನ್ನು ಸಲ್ಲಿಸ ಬಹುದಾಗಿದೆ. ಅಧ್ಯಕ್ಷರು, ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ, ಕೊಠಡಿ ಸಂ.36 ನೆಲಮಹಡಿ, ವಿಕಾಸಸೌಧ, ಬೆಂಗಳೂರು -1. ದೂರವಾಣಿ 22386063, 22034220ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪಿ. ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.