ನಾಪೋಕ್ಲು, ಸೆ. 27: ಸಮೀಪದ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌಷ್ಟಿಕ ಸಪ್ತಾಹವನ್ನು ಆಚರಿಸಲಾಯಿತು.

ಅಜ್ಜಿಮುಟ್ಟ, ಚೋನಕೆರೆ, ಹಳೇ ತಾಲೂಕು, ಮೂಟೇರಿ ಅಂಗನವಾಡಿ ಕೇಂದ್ರದ ಕಾರ್ಯಕರ್ತರು ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಮಹಿಳಾ ಸಮಾಜದ ಸದಸ್ಯರು ವಿವಿಧ ಬಗೆಯ ಪೌಷ್ಟಿಕ ಆಹಾರಗಳ ಪ್ರಾತ್ಯಕ್ಷಿಕೆ ನೀಡಿದರು.

ಹಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆ ಘನವತಿ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ತಿಳಿಸಿದರು. ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯೆ ಜ್ಯೋತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.