ಸೋಮವಾರಪೇಟೆ, ಆ. 19: ಸ್ವಚ್ಛ ಭಾರತ ಮಿಷನ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಶಾಂತಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಕೆ.ಎಂ. ಸುದರ್ಶನ್ ಪ್ರಥಮ ಬಹುಮಾನ ಗಳಿಸಿದ್ದಾನೆ.
ಮಡಿಕೇರಿಯ ಬಿಆರ್ಸಿ ಕಚೇರಿಯಲ್ಲಿ ಆಯೋಜಿಸಿದ್ದ “ಗ್ರಾಮ ನೈರ್ಮಲ್ಯಕ್ಕೆ ಗ್ರಾಮಸ್ಥರಿಗೆ ನಿಮ್ಮ ಸಲಹೆ” ವಿಷಯವಾಗಿ ಪ್ರಬಂಧ ಬರೆದು ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಸುದರ್ಶನ್, ಈ ಹಿಂದೆ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದನು.
ಮಡಿಕೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಅವರು ಬಹುಮಾನ ಹಾಗೂ ಪ್ರಶಂಸ ಪತ್ರವನ್ನು ವಿತರಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.