ಕುಶಾಲನಗರ, ಸೆ. 6: ಕುಶಾಲನಗರ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಯೋಗಾಲಯಗಳ ಉದ್ಘಾಟನೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ನೂತನವಾಗಿ ಆರಂಭಿಸಲಾಗಿರುವ ರಾಸಾಯನಿಕ, ಜೀವಶಾಸ್ತ್ರ, ಭೌತಶಾಸ್ತ್ರ ಹಾಗೂ ಗಣಕಯಂತ್ರ ಪ್ರಯೋಗಾಲಯಗಳನ್ನು ಉದ್ಘಾಟಿಸಲಾಯಿತು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗರಹಳ್ಳಿಯ ಶಾಂತಿನಿಕೇತನ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಸಿಸ್ಟರ್ ಮೇರಿ ಫಾತಿಮಾ, ಕುಶಾಲನಗರ ಫಾತಿಮಾ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ನಿರ್ಮಲಾ, ಶಿಕ್ಷಕರಾದ ಸವರಿನ್ ಡಿಸೋಜ, ಸದಾಶಿವ ಪಲ್ಲೇದ್ ಪಾಲ್ಗೊಂಡಿದ್ದರು.
ಈ ಸಂದರ್ಭ ಮಹಾತ್ಮ ಗಾಂಧಿ ಪದವಿ ಕಾಲೇಜಿನ ಪ್ರಾಂಶುಪಾಲ ಪಂಡರಿನಾಥ ನಾಯ್ಡು, ವಿವೇಕಾನಂದ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರವೀಂದ್ರಬಾಬು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಇದ್ದರು.