ಮಡಿಕೇರಿ, ಸೆ. 18: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ”ಕ್ಕೆÉ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ -ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಟ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವದು. 2016ರ ಅಕ್ಟೋಬರ್ 2 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವದು.
ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪøಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಧಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ -ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 20ರ ಒಳಗಾಗಿ ಅರ್ಜಿಯನ್ನು ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ (ಇನ್ಫೆಂಟ್ರಿ ರಸ್ತೆ), ಬೆಂಗಳೂರು-560001 ಅಥವಾ ಇ-ಮೇಲ್ ಃvಚಿಡಿಣheiಟಿಜಿohub @gmಚಿiಟ.ಛಿom ವಿಳಾಸಕ್ಕೆ ಕಳುಹಿಸಬಹುದಾಗಿದೆ.