ಮಡಿಕೇರಿ, ಅ. 17: ಕಾವೇರಿ ತುಲಾ ಸಂಕ್ರಮಣ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರ ಜನ್ಮದಿನಾಚರಣೆ ಪ್ರಯುಕ್ತ ಇಂದು ಇಲ್ಲಿನ ಬಾಲಭವನದ ಮಕ್ಕಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬೋಪಯ್ಯ ಅವರ ಪತ್ನಿ ಕುಂತಿ ಬೋಪಯ್ಯ, ಪುತ್ರಿ ಪ್ರಜ್ಞಾ ಬೋಪಯ್ಯ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ತಾ.ಪಂ. ಅದ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಬಿಜೆಪಿ ಪದಾಧಿಕಾರಿಗಳು ಇದ್ದರು.