ಭಾಗಮಂಡಲ, ಆ. 25: ಕೊಡಗು ಜಿಲ್ಲಾ ಬಿಜೆಪಿ ಕೃಷಿ ಮೋರ್ಚಾ ವತಿಯಿಂದ ತಲಕಾವೇರಿಯ ಬ್ರಹ್ಮಗಿರಿ ತಪ್ಪಲಿನಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದು, ಅದರಲ್ಲೂ ಭಾಗಮಂಡಲ-ತಲಕಾವೇರಿ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ತೀರ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಸಸಿ ನೆಡುವದರಿಂದ ಕ್ಷೇತ್ರದ ತೀರ್ಥದ ಪ್ರಮಾಣ ಹೆಚ್ಚಾಗಿ ಕಾವೇರಿ ನದಿಯ ನೀರಿನ ಪ್ರಮಾಣ ಕೂಡ ಜಾಸ್ತಿಯಾಗಲಿದೆ ಎಂದರು.
150ಕ್ಕೂ ಹೆಚ್ಚಿನ ಸಸಿಗಳನ್ನು ಈ ಸಂದರ್ಭ ನೆಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಮನು ಮುತ್ತಪ್ಪ, ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್, ತಾಲೂಕು ಕೃಷಿ ಮೋರ್ಚಾದ ಮುಖಂಡರಾದ ಬೆಪ್ಪುರನ ಮೇದಪ್ಪ, ತಾಕೇರಿ ಪೊನ್ನಪ್ಪ, ಕೊಂಡೀರ ಪ್ರಸನ್ನ, ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ, ಗ್ರಾ.ಪಂ. ಅಧ್ಯಕ್ಷೆ ಸುಮಿತ್ರಾ, ಉಪಾಧ್ಯಕ್ಷೆ ಭವಾನಿ, ಸದಸ್ಯರಾದ ಭಾಸ್ಕರ, ಯೋಗಾನಂದ, ಪಿ.ಎಂ. ರಾಜೀವ್ ಹಾಗೂ ಇನ್ನಿತರರು ಇದ್ದರು.