ಭಾಗಮಂಡಲ, ಅ. 14: ಕೊಡಗು ಬಿಜೆಪಿ ಯುವ ಮೋರ್ಚಾದ ವತಿಯಿಂದ ಇಂದು ಭಾಗಮಂಡಲದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಶಾಸಕ ಕೆ.ಜಿ. ಬೋಪಯ್ಯ, ಬಿಜೆಪಿ ಅಧ್ಯಕ್ಷ ಮನು ಮುತ್ತಪ್ಪ, ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಾಂತಿ ಸತೀಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಮಹಿಳಾ ಮೋರ್ಚಾದ ಅಧ್ಯಕ್ಷರು ಹಾಗೂ ಸದಸ್ಯರು, ಬಲ್ಲಮಾವಟಿ, ಭಾಗಮಂಡಲ ಗ್ರಾಮ ಪಂಚಾಯಿತಿ ಸದಸ್ಯರುಗಳು ಪಾಲ್ಗೊಂಡಿದ್ದರು.