ಮಡಿಕೇರಿ, ನ. 19: ಅಂತರ್ರಾಷ್ಟ್ರೀಯ ಭಾಷೆ ಕಲಿಯುವ ದಾವಂತದಲ್ಲಿರುವ ಮಕ್ಕಳಿಗೆ ಮಾತೃ ಭಾಷೆ ಕನ್ನಡವನ್ನು ಕಲಿಸುವ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು ಅಭಿಪ್ರಾಯ ಪಟ್ಟರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಮ್ಮಿಕೊಂಡಿರುವ ಶುದ್ಧ ಕನ್ನಡ ಮಾತನಾಡುವ ಹಾಗೂ ಬರೆಯುವ ಸ್ಪರ್ಧೆಗೆ ನಗರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು. ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರು ವದು ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯುತ್ತಮ ಕಾರ್ಯಕ್ರಮ. ಕನ್ನಡಕ್ಕೆ ಹಲವು ಕವಿಗಳು ಮಹತ್ತರ ಕೊಡುಗೆಗಳನ್ನು ನೀಡಿದ್ದು, ಅವುಗಳನ್ನು ಇಂದಿನ ಮಕ್ಕಳಿಗೆ ತಿಳಿಸುವ ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿರು ವದು ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಅತ್ಯುತ್ತಮ ಕಾರ್ಯಕ್ರಮ.