ಕೂಡಿಗೆ, ಜ. 30 : ಪೋಷಕರು ತಮ್ಮ ಮಕ್ಕಳ ಕಲಿಕೆ ಬಗ್ಗೆ ವಿಶೇಷ ಗಮನ ಹರಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ಎನ್. ಎಸ್. ಜಯಣ್ಣ ಹೇಳಿದರು.

ಸಮೀಪದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ತೊರೆನೂರು ವಿರಕ್ತಮಠದ ಶ್ರೀಮಲ್ಲೇಶ ಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಹೊಂದಿ ತಮ್ಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕು ಎಂದರು.

ಸಮಾರೋಪ ಭಾಷಣ ಮಾಡಿದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶ ವಿದ್ಯಾರ್ಥಿಗಳಿಗೆ ಸರಿ ಸಮಾನಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳುವ ಮೂಲಕ ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ಸ್ಥಾನಮಾನ ಹೊಂದಬೇಕು ಎಂದರು.

ತೊರೆನೂರು ಗ್ರಾ.ಪಂ. ಅಧ್ಯಕ್ಷ ಕೆ.ಬಿ. ದೇವರಾಜು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಟಿ.ಜೆ. ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು.

ಗ್ರಾ.ಪಂ. ಉಪಾಧ್ಯಕ್ಷೆ ದ್ರಾಕ್ಷಾಯಿಣಿ, ಸದಸ್ಯೆ ರೂಪದೇವರಾಜ್, ಕುಶಾಲನಗರ ಎ.ಪಿ.ಸಿ.ಎಂ.ಎಸ್. ನ ಅಧ್ಯಕ್ಷ ಎಚ್.ಬಿ.ಚಂದ್ರಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಕೆ. ಪಾಂಡುರಂಗ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ಮುಖಂಡರಾದ ಪಟೇಲ್ ಶಾಂತಪ್ಪ, ಟಿ.ಎಸ್. ಬಸವರಾಜು, ಟಿ.ಟಿ. ವೆಂಕಟಾಚಲ, ಡಿ.ಆರ್. ಶ್ರೀನಿವಾಸ್, ಮುಖ್ಯಶಿಕ್ಷಕ ಟಿ.ಡಿ. ದೇವಪ್ಪ. ಶಿಕ್ಷಕ ಬಿ. ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಶಿಕ್ಷಕಿ ಭಾಗ್ಯಲಕ್ಷ್ಮಿ ಕಾರ್ಯಕ್ರಮ ನಿರ್ವಹಿಸಿದರು. ದೇವಪ್ಪ ಸ್ವಾಗತಿಸಿ, ಶಿಕ್ಷಕ ಎಚ್.ಎಸ್. ಮಂಜುನಾಥ್ ವಂದಿಸಿದರು. ಎಸ್.ಎಸ್. ಯೋಗೇಶ್ ವರದಿ ವಾಚಿಸಿದರು. ಇದೇ ಸಂದರ್ಭ ತಾ.ಪಂ. ಸದಸ್ಯ ಜಯಣ್ಣ, ಗ್ರಾ.ಪಂ. ಅಧ್ಯಕ್ಷ ದೇವರಾಜು, ನಿವೃತ್ತ ಮುಖ್ಯಶಿಕ್ಷಕ ಎಸ್.ಟಿ. ರಾಜು, ಶಿಕ್ಷಕ ಎಸ್.ಎ. ಯೋಗೇಶ್, ಮುಖ್ಯಶಿಕ್ಷಕ ದೇವಪ್ಪ ಅವರನ್ನು ಸನ್ಮಾನಿಸಲಾಯಿತು.

ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.