ಮಡಿಕೇರಿ, ಸೆ.13: ಗೌರಿ ಗಣೇಶ ವಿಸರ್ಜನಾ ಕಾರ್ಯಕ್ರಮ ಸಂದರ್ಭ ದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವದು ಹಾಗೂ ಶಾಂತಿಯುತ ವಾಗಿ ಗೌರಿ ಗಣೇಶ ವಿಸರ್ಜನಾ ಕಾರ್ಯಕ್ರಮ ನಡೆಸುವಂತಾಗಲು ಸೋಮವಾರಪೇಟೆ ತಾಲೂಕಿನ ಎಡಪಾರೆÉ ಗ್ರಾಮದಲ್ಲಿ ತಾ.14ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ, ವೀರಾಜಪೇಟೆ ಗ್ರಾಮಾಂತರ ಠಾಣಾ ಸರಹದ್ದಿನ ಅಮ್ಮತ್ತಿಯ 10 ಕಿ.ಮೀ. ವ್ಯಾಪ್ತಿಯಲ್ಲಿ ತಾ. 16 ರ ಮಧ್ಯರಾತ್ರಿಯಿಂದ ತಾ. 18ರ ಬೆಳಿಗ್ಗೆ 10 ಗಂಟೆಯವರೆಗೆ, ಹಾಗೆಯೇ ವೀರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ತಾ. 14ರ ಮಧ್ಯರಾತ್ರಿ ಯಿಂದ ತಾ. 16ರ ಬೆಳಿಗ್ಗೆ 10 ಗಂಟೆಯವರೆಗೆ ಅಬಕಾರಿ ಕಾಯ್ದೆ 1965ರ ಕಲಂ 21 ರ ಅಧಿಕಾರದಂತೆ ಎಲ್ಲಾ ಮದ್ಯ ಮಾರಾಟ ಮಳಿಗೆಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶ ಹೊರಡಿಸಿದ್ದಾರೆ.