ಮಡಿಕೇರಿ, ಡಿ. 7: ಮಡಿಕೇರಿಯ ಶ್ರೀ ಮುತ್ತಪ್ಪ ದೇವಸ್ಥಾನದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸಂಸ್ಥೆಯ ಸಹಯೋಗದಲ್ಲಿ ಮಧುಮೇಹ ಪರಿಶೀಲನಾ ಶಿಬಿರ ನಡೆಯಿತು. ಶಿಬಿರವನ್ನು ನಗರಸಭಾ ಉಪಾಧ್ಯಕ್ಷ ಪ್ರಕಾಶ್, ಮುತ್ತಪ್ಪ ದೇವಸ್ಥಾನ ಸಮಿತಿಯ ಅಧ್ಯಕ್ಷ ಸುರೇಶ್ ಬೆಳಗೆರೆ, ನಗರಸಭಾ ಸದಸ್ಯೆ ಸಂಗೀತ ಪ್ರಸನ್ನ, ಮಾಜಿ ಅಧ್ಯಕ್ಷ ಟಿ.ಕೆ. ಸುಧೀರ್ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಲಾಯಿತು. ಶಿಬಿರದಲ್ಲಿ 200 ಜನರಿಗೆ ಮಧುಮೇಹ ತಪಾಸಣೆ ಮಾಡಲಾಯಿತು. ಗಾನ ಪ್ರಶಾಂತ್, ಕೃಷ್ಣವೇಣಿ ಪ್ರಸಾದ್ ಹಾಗೂ ಕಾರ್ಯದರ್ಶಿ ಡಾ. ನವೀನ್ ಪಾಲ್ಗೊಂಡಿದ್ದರು.